Anganwadi Teacher Jobs | ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ ಸ್ನೇಹಿತರೆ ಇವತ್ತಿನ ಒಂದು ಲೇಖನದಲ್ಲಿ ತಿಳಿಸುವುದೇನೆಂದರೆ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಖಾಲಿಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಮಹಿಳೆಯರು ಅರ್ಜಿಯನ್ನು ಸಲ್ಲಿಸಲು ಬೇಕಾದ ಸಂಪೂರ್ಣವಾದ ಮಾಹಿತಿಯನ್ನು ಕೆಳಗಡೆ ಸಂಪೂರ್ಣವಾಗಿ ವಿವರಿಸಲಾಗಿದೆ ಆದರಿಂದ ಈ ಲೇಖನವನ್ನು ಕೊನೆವರೆಗೂ ಓದಿಕೊಳ್ಳಿ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯಲ್ಲಿ 7 ಸಮೀಪ ಅಂಗನವಾಡಿ ಕಾರ್ಯಕರ್ತೆಯರು ಮತ್ತು 25 ಅಂಗನವಾಡಿ ಸಹಾಯಕಿಯರು ಹಾಗೂ ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಖಾಲಿ ಇರುವಂತಹ ಅಂಗನವಾಡಿಯ ಕಾರ್ಯಕರ್ತೆಯರು ಹಾಗೆ ಸಹಾಯಕಿಯರು ಹುದ್ದೆಗಳಿಗೆ ನೇಮಕಾತಿಗೆ ಅರ್ಹತೆ ಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿ ಗಳಿಂದ ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದು.
Anganwadi Teacher Jobs | ಶೈಕ್ಷಣಿಕ ಅರ್ಹತೆ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪಾಸ್ ಆಗಿರಬೇಕು ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿಯನ್ನು ಪಾಸ್ ಆಗಿರಬೇಕು.
Anganwadi Teacher Jobs | ವಯೋಮಿತಿ ವಿವರ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 19 ವರ್ಷಗಳ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ವಿಕಲಚೇತನರಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
Anganwadi Teacher Jobs | ಅರ್ಜಿಯನ್ನು ಸಲ್ಲಿಸಲು ಬೇಕಾಗುವಂತಹ ದಾಖಲೆಗಳು:
• ಅರ್ಜಿ ನಿಗದಿತ ನಮೂನೆ
• ಜನನ ಪ್ರಮಾಣ ಪತ್ರ
• ಜನ್ಮ ದಿನಾಂಕ ಇರುವ SSLC ಮತ್ತು PUC ಅಂಕಪಟ್ಟಿ
• ನಿಗಧಿತ ವಿದ್ಯಾರ್ಹತೆಯ ಅಂಕಪಟ್ಟಿ
• ವಾಸಸ್ಥಳದ ದೃಢೀಕರಣ ಪತ್ರ
• ಜಾತಿ ಪ್ರಮಾಣ ಪತ್ರ
• ಅಧಾರ್ ಕಾರ್ಡ್
• ಮತದಾರರ ಗುರುತಿನ ಚೀಟಿ
• ರೇಷನ್ ಕಾರ್ಡ್ ಕಡ್ಡಾಯ
• ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ
• ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ
ಈ ಮೇಲಿನ ಎಲ್ಲಾ ದಾಖಲೆಗಳು ಕಡ್ಡಾಯವಾಗಿ ಇರಬೇಕು.
ಈ ಮೇಲಿನ ಎಲ್ಲಾ ಜಿಲ್ಲೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಿನಾಂಕ | 8/08/2024
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಲಿಂಕ್: https://karnemakaone.kar.nic.in/abcd/