Free Sewing Machine: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಅರ್ಹ ಮತ್ತು ಆಸಕ್ತಿ ಉಳ್ಳಂತಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಬಯಸುವ ಮಹಿಳೆಯರಿಗೆ ಒಂದು ಉತ್ತಮ ಅವಕಾಶ ಎಂದು ಹೇಳಬಹುದು. ಅರ್ಜಿ ಸಲ್ಲಿಸಲು ಸಂಪೂರ್ಣ ವಿವರ ಈ ಕೆಳಗಿದೆ.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮತದಾರರ ಗುರುತಿನ ಚೀಟಿ
- ಪಾಸ್ಪೋರ್ಟ್ ಸೈಜ್ ಫೋಟೋ
- ಜನ್ಮ ದಿನಾಂಕದ ದಾಖಲೆ
- ಶೈಕ್ಷಣಿಕ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಟೈಲರಿಂಗ್ ಕೆಲಸ ಮಾಡುತ್ತಿರುವ ದೃಡೀಕರಣ ಪತ್ರ.
ಈ ಮೇಲಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ಉಚಿತ ಹೋಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆಗಳು ಏನೆಂಬುದನ್ನು ಈ ಕೆಳಗೆ ತಿಳಿದುಕೊಳ್ಳಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ಕುಟುಂಬದ ಆದಾಯ 98,000 ಒಳಗಿರಬೇಕು ಹಾಗೂ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದರೆ ₹1,20,000 ಒಳಗೆ ಇರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಹಾಗೂ 55 ವರ್ಷ ಮೀರಿರಬಾರದು. ಉಚಿತ ಹೊಲಿಗೆ ಯಂತ್ರ ಪಡೆಯಲು ಆಸಕ್ತಿ ಇರುವ ಫಲಾನುಭವಿಗಳು ಹಿಂದುಳಿದ ವರ್ಗಗಳಾದ ಪ್ರವರ್ಗ-01, 2A,3A ಹಾಗೂ 3B ವರ್ಗಕ್ಕೆ ಸೇರಿದವರಾಗಿರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ, ನೀವು ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಮೇಲಿರುವ ಅರ್ಹತೆಗಳನ್ನು ಪೂರೈಸಿರಬೇಕಾಗುತ್ತದೆ ಹಾಗೂ ಕೊಟ್ಟಿರುವ ದಾಖಲೆಗಳನ್ನು ತೆಗೆದುಕೊಂಡು ಕೆಳಗಡೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವುದರಲ್ಲಿ ಯಾವುದೇ ರೀತಿಯ ಸಂದೇಹವಿದ್ದಲ್ಲಿ ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ
ವಿಶೇಷ ಸೂಚನೆ: ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆಯುಳ್ಳಂತಹ ಅಭ್ಯರ್ಥಿಗಳಿಗೆ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಿದರೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿರುತ್ತದೆ.