Gruhalakshmi Yojane: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಹಿಡಿದು ಇಲ್ಲಿಯವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡುತ್ತಿದೆ. ಹಾಗೂ ಕೆಲವರು ಹತ್ತು ಕಂತು ಹಾಗೂ ಹನ್ನೊಂದನೇ ಕಂತಿನವರಿಗೆ ಹಣವನ್ನು ಪಡೆದುಕೊಂಡಿರುತ್ತಾರೆ. ಹಾಗೂ ಗೃಹಲಕ್ಷ್ಮಿ ಯೋಜನೆ 4,000 ಹಣ ಒಟ್ಟಿಗೆ ಜಮಾ ಆಗಲಿದೆ ಇದರ ಬಗ್ಗೆ ಸಂಪೂರ್ಣವಾದ ವಿವರ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ, ಕೆಲವು ತಾಂತ್ರಿಕ ದೋಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದು ವಿಳಂಬವಾಗಿದೆ. ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ 4000 ಹಣವನ್ನು ಯಾವುದೇ ರೀತಿಯ ತೊಂದರೆ ಇಲ್ಲದೆ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಎದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುತ್ತಾರೆ.
ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆ(Gruhalakshmi Yojane)ಯ ಹಣ ಚೆಕ್ ಮಾಡಿಕೊಳ್ಳಿ!!
ಸ್ನೇಹಿತರೆ, ನೀವು ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಲು ಈ ಕೆಳಗೆ ನೀಡಿರುವ ಹಂತಗಳನ್ನು ನೀವು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಹಣವು ಯಾವ ದಿನಾಂಕದಂದು ಜಮಾ ಆಗಿದೆ ಹಾಗೂ ಎಷ್ಟು ಹಣ ಜಮಾ ಆಗಿದೆ ಎಂಬ ಸಂಪೂರ್ಣ ವಿವರವನ್ನು ಪಡೆದುಕೊಳ್ಳಬಹುದಾಗಿದೆ.
ಹಂತ 01: ಮೊದಲು ನೀವು ಪ್ಲೇ ಸ್ಟೋರ್ ನಿಂದ “ಡಿ ಬಿ ಟಿ ಕರ್ನಾಟಕ” ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹಂತ 02: ನಂತರ ಫಲಾನುಭವಿಯ ಆಧಾರ್ ಕಾರ್ಡ್ ನಂಬರ್ ಅನ್ನು ನಮೂದಿಸುವ ಮೂಲಕ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ ಅದನ್ನು ಅಲ್ಲಿ ನೀವು ನಮೂದಿಸಬೇಕಾಗುತ್ತದೆ.
ಹಂತ 03: ತದನಂತರದಲ್ಲಿ ನೀವು “ಎಂ ಪಿನ್” ಅನ್ನು ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ ಹಾಗೂ ಫಲಾನುಭವಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ನೀವು ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಿ.
ಹಂತ 04: ಅಲ್ಲಿ ನಿಮಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಎಂಬ ಎರಡು ಯೋಜನೆಯ ಹೆಸರು ಕಾಣಿಸುತ್ತವೆ ಅಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ಸ್ನೇಹಿತರೆ, ನೀವು ಗೃಹಲಕ್ಷ್ಮಿ ಯೋಜನೆಯ ಹಣ ಯಾವ ದಿನದಂದು ಎಷ್ಟು ಹಣ ಜಮಾ ಆಗಿದೆ ಎಂಬ ಸಂಪೂರ್ಣವಾದ ವಿವರ ಅಲ್ಲಿ ನಿಮಗೆ ನೀಡಲಾಗಿರುತ್ತದೆ. ನಿಮ್ಮ ಖಾತೆಗೆ ಮೊದಲು ಹಣ ಜಮಾ ಆಗಿದೆಯಾ ಇಲ್ಲವಾ ಎಂದು ಖಚಿತಪಡಿಸಿಕೊಳ್ಳಿ. ತದನಂತರದಲ್ಲಿ ನೀವು ಹತ್ತಿರದ ಬ್ಯಾಂಕಿಗೆ ಭೇಟಿ ನೀಡುವ ಮೂಲಕ ಹಣ ಪಡೆಯಬಹುದು.