PM Kisan: ನಮಸ್ಕಾರ ಎಲ್ಲರಿಗೂ, ನಿಮಗೆಲ್ಲಾ ಗೊತ್ತಿರುವ ಹಾಗೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿಯಲ್ಲಿ ರೈತರು ಪ್ರತಿ ವರ್ಷಕ್ಕೆ ₹6,000 ರೂಪಾಯಿಗಳನ್ನು ಪಡೆದುಕೊಳ್ಳುತ್ತಾರೆ. ಅಂದರೆ ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ ₹2,000 ರೂಪಾಯಿ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಈ ಯೋಜನೆಯು ಕೇಂದ್ರ ಸರ್ಕಾರದ ಉಪಕ್ರಮವಾಗಿದ್ದು, ಈ ಯೋಜನೆಯ ಅಡಿಯಲ್ಲಿ ದೇಶದ ರೈತರು ಲಾಭವನ್ನು ಪಡೆಯುತ್ತಿದ್ದಾರೆ.
ಕಳೆದ 2 ತಿಂಗಳ ಹಿಂದೆ ಅಂದರೆ ಜೂನ್ ತಿಂಗಳಲ್ಲಿ ಈ ಯೋಜನೆಯ ಹಣವನ್ನು ರೈತರು ಪಡೆದುಕೊಂಡಿರುತ್ತಾರೆ. ಅಂದರೆ 17ನೇ ಕಂತಿನ ಹಣವನ್ನು ಪಡೆದುಕೊಂಡಿರುತ್ತಾರೆ. ಇದೀಗ 18ನೇ ಕಂತಿನ ಹಣವನ್ನು ಪಡೆದುಕೊಳ್ಳಲು ರೈತರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಹಾಗಾಗಿ 18ನೇ ಕಂತಿನ ಹಣವನ್ನು ಪಡೆದುಕೊಳ್ಳಲು ಕೆಲವು ಮಾಹಿತಿಗಳು ಇಲ್ಲಿವೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವು ಕಳೆದ ಜೂನ್ ತಿಂಗಳಿನಲ್ಲಿ ಫಲಾನುಭವಿ ರೈತರ ಖಾತೆಗೆ ಜಮಾ ಆಗಿದ್ದು, ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ಮಧ್ಯದಲ್ಲಿ ಬರುವ ಸಾಧ್ಯತೆ ಇದೆ. 18ನೇ ಕಂತಿನ ಹಣವನ್ನು ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಒಳಗಾಗಿ ಪಡೆಯುವ ಸಾಧ್ಯತೆ ಇರುತ್ತದೆ.
ಫಲಾನುಭವಿಗಳ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಿ:
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
- Know Your Status ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ.
- ಕ್ಯಾಪ್ಚ ಕೋಡ್ ಅನ್ನು ನಮೂದಿಸುವ ಮೂಲಕ ವಿವರಗಳನ್ನು ಪಡೆಯಿರಿ.
- ನಂತರ ನಿಮ್ಮ ಸ್ಟೇಟಸ್ ಡಿಸ್ಪ್ಲೇ ಆಗುತ್ತದೆ.
ಮೇಲಿರುವ ಹಂತಗಳನ್ನು ಪರಿಶೀಲಿಸಿಕೊಂಡು ನೀವು ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂದು ಪರಿಶೀಲಿಸಿಕೊಳ್ಳಿ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯ 18ನೇ ಕಂತಿನ ಹಣವನ್ನು ಪಡೆಯಲು ಅರ್ಹರಾಗಿದ್ದೀರಾ ಇಲ್ಲವಾ ಎಂದು ತಿಳಿದುಕೊಳ್ಳಿ.