Post Office Scholarship: ವಿದ್ಯಾರ್ಥಿಗಳಿಗೆ ₹6,000 ಸ್ಕಾಲರ್ಶಿಪ್! ಅಂಚೆ ಇಲಾಖೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ!

Post Office Scholarship: ನಮಸ್ಕಾರ ಎಲ್ಲರಿಗೂ ಈ ಒಂದು ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಅಂಚೆ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಸ್ಕಾಲರ್ಶಿಪ್ ಮೊತ್ತವನ್ನು ಪಡೆದುಕೊಳ್ಳುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿರುತ್ತದೆ. ಆದ್ದರಿಂದ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ. 

ಅಂಚೆ ಇಲಾಖೆ ವಿದ್ಯಾರ್ಥಿ ವೇತನ: 

ಹೌದು ಸ್ನೇಹಿತರೆ ಅಂಚೆ ಇಲಾಖೆಯ ವತಿಯಿಂದ ಆರರಿಂದ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲಿ ಎಂದು ಹೇಳಿ “ದೀನ್ ದಯಾಳ್ ಸ್ಪರ್ಶ” ಯೋಜನೆಯಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವವರಿಸಲಾಗಿದೆ. ಈ ವಿದ್ಯಾರ್ಥಿ ವೇತನದ ಯೋಜನೆ ಅಡಿ ಅಂಚೆ ಚೀಟಿಗಳ ಮೌಲ್ಯ ಹಾಗೂ ಸಂಶೋಧನೆಯ ಕುರಿತು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು ಎಂದು ತಿಳಿದುಬಂದಿದೆ. 

ಅರ್ಜಿ ಸಲ್ಲಿಸಲು ಅರ್ಹತೆ:

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು 2023-24 ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದಲ್ಲಿ 60% ನಷ್ಟು ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು. ಹಾಗೂ ಅಂತ್ಯ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಶಾಲೆಗಳ ಅಂಚೆಚೀಟಿ ಕ್ಲಬ್ ಸದಸ್ಯರಾಗಿರಬೇಕು ಎಂದು ತಿಳಿಸಲಾಗಿರುತ್ತದೆ.

ಮೇಲೆ ನೀಡಿರುವ ಆಧಾರಗಳ ಮೇಲೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಪ್ರತಿ ವರ್ಷ ₹6,000 ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಅಂಚೆ ಚೀಟಿಗಳ ಸಂಗ್ರಹ ರಸಪ್ರಶ್ನೆ ಹಾಗೂ ಈ ಯೋಜನೆಯ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ: www.karnatakapost.gov.in

ಹೆಚ್ಚಿನ ಮಾಹಿತಿಗಾಗಿ ನೀವು ಮೇಲೆ ನೀಡಿರುವ ಜಾಲತಾಣವನ್ನು ಸಂದರ್ಶಿಸಬಹುದಾಗಿರುತ್ತದೆ. ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 3ನೇ ತಾರೀಕು ಕೊನೆಯ ದಿನಾಂಕವಾಗಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿದರೆ ಮಾತ್ರ ಮಾನ್ಯವಾಗಿರುತ್ತದೆ ಎಂದು ತಿಳಿದು ಬಂದಿರುತ್ತದೆ.

Leave a Comment

error: Don't Copy Bro !!