SSP Scholarship: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ, ಎಸ್.ಎಸ್ ಪಿ ಸ್ಕಾಲರ್ಶಿಪ್ (SSP Scholarship) ಗೆ ಅರ್ಜಿ ಸಲ್ಲಿಸಲು ಅರ್ಜಿಗಳು ಪ್ರಾರಂಭವಾಗಿದ್ದು, ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನೆಂಬುದನ್ನು ಈ ಲೇಖನದಲ್ಲಿ ಸಂಪೂರ್ಣವಾದ ವಿಷಯ ತಿಳಿಯಿರಿ.
ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಆರ್ಥಿಕ ಸಹಾಯಧನವನ್ನು ಸರ್ಕಾರವು ವಿದ್ಯಾರ್ಥಿಗಳಿಗೆ ನೀಡುತ್ತದೆ. ಅರ್ಹತೆಯುಳ್ಳ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿರುತ್ತದೆ.
(SSP Scholarship) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು?
SSP ಸ್ಕಾಲರ್ಶಿಪ್ಗೆ ಪ್ರಸ್ತುತ ಅರ್ಜಿ ಸಲ್ಲಿಸಬಹುದಾದ ವಿದ್ಯಾರ್ಥಿಗಳೆಂದರೆ, ಪಿಯುಸಿ, ಡಿಗ್ರಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ರಾಜ್ಯದ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇಮೇಲ್ ಐಡಿ
- ಮೊಬೈಲ್ ನಂಬರ್
- ವಿಳಾಸದ ಪುರಾವೇ
- ಹಾಸ್ಟೆಲ್ ವಿವರಗಳು
- ಕಾಲೇಜಿನ ರಿಜಿಸ್ಟರ್ ನಂಬರ್
ಮೇಲೆ ನೀಡಿರುವ ದಾಖಲೆಗಳನ್ನು ಬಳಸಿಕೊಂಡು ನೀವು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಸಿ ಮತ್ತು ಎಸ್.ಟಿ ವರ್ಗದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗೂ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇದ್ದಲ್ಲಿ ನಿಮ್ಮ ಹತ್ತಿರ ಇರುವ ಆನ್ಲೈನ್ ಸೆಂಟರ್ ಭೇಟಿ ನೀಡಿ ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.