Vidyasiri Scholarship: ನಮಸ್ಕಾರ ಎಲ್ಲರಿಗೂ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ವೇತನವು ಬಹು ಮುಖ್ಯವಾದ ಹಾಗೂ ವಿದ್ಯಾಭ್ಯಾಸದ ಸಮಯದಲ್ಲಿ ಉಪಯುಕ್ತವಾಗುವ ಸಹಾಯಧನ ಎಂದು ಹೇಳಬಹುದು. ಸರ್ಕಾರದಿಂದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ “ವಿದ್ಯಾಸಿರಿ” ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಇದರ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.
ಈ ವಿದ್ಯಾರ್ಥಿ ವೇತನವು ಎಸ್.ಸಿ , ಎಸ್.ಟಿ ಮತ್ತು ಓ.ಬಿ. ಸಿ. ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವ ವಿದ್ಯಾರ್ಥಿ ವೇತನ ಆಗಿದ್ದು, ಅರ್ಜಿಯ ಪರಿಶೀಲನೆ ಬಳಿಕ ಅರ್ಹತೆಗಳ ವಿದ್ಯಾರ್ಥಿಗಳಿಗೆ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ.
(Vidyasiri Scholarship) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- SSLC & PUC ಮಾರ್ಕ್ಸ್ ಕಾರ್ಡ್
- ನಿವಾಸ ಪ್ರಮಾಣ ಪತ್ರ
- ಕಾಲೇಜು ದಾಖಲಾತಿ
(Vidyasiri Scholarship) ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ಆದಾಯವು ವರ್ಷಕ್ಕೆ 1 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು ಹಾಗೂ ಪ್ರಥಮ ವರ್ಗದ ವಿದ್ಯಾರ್ಥಿಯ ಕುಟುಂಬದ ಒಂದು ವರ್ಷದ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು 10ನೇ ತರಗತಿಯಲ್ಲಿ 75% ಗಿಂತ ಹೆಚ್ಚು ಅಂಕಗಳನ್ನು ತೆಗೆದಿರಬೇಕು ಎಂದು ತಿಳಿಸಲಾಗಿದೆ ಹಾಗೂ ಕನಿಷ್ಠ ಏಳು ವರ್ಷಗಳ ಕಾಲ ವಿದ್ಯಾರ್ಥಿಯು ವಿದ್ಯಾಭ್ಯಾಸವನ್ನು ಮಾಡಿರಬೇಕಾಗಿರುತ್ತದೆ. ಹಾಗೂ ಕರ್ನಾಟಕದ ಯಾವುದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ವಿದ್ಯಾರ್ಥಿ ಆಗಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಎಸ್.ಸಿ, ಎಸ್.ಟಿ. ಹಾಗೂ ಓ.ಬಿ.ಸಿ. ವರ್ಗಕ್ಕೆ ಸೇರಿದವರಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಕೆಳಗಡೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹಾಗೂ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ, ನಿಮ್ಮ ಹತ್ತಿರ ಇರುವ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಇನ್ನಷ್ಟು ಸುಲಭವಾಗಿ ಅರಚಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ನೀವು ಬಳಸಿಕೊಂಡು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗೂ ಮೇಲೆ ಹೇಳಿದ ಹಾಗೆ ಅರ್ಜಿ ಸಲ್ಲಿಸಲು ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಸಂಪರ್ಕಿಸಿ.